ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ.
ಆಷಾಢ ಶುಕ್ರವಾರ ನಾಡ ದೇವತೆ ಚಾಮುಂಡೇಶ್ವರಿಗೆ ಮುಂಜಾನೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಹೂವಿನ ನಡುವೆ ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಾ ಸಾರ್ವಜನಿಕರಿಗೆ ದರ್ಶನ ನೀಡಿದರು. ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನಲೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಖಾಸಗಿ ವಾಹನಗಳ ಪ್ರವೇಶ ನಿರ್ಭಂಧಿಸಲಾಗಿದ್ದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಮಹಲ್ ಪ್ಯಾಲೇಸ್ ಆವರಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ನಾಡದೇವಿಯ ದರುಶನ ಪಡೆಯಲು ಜಿಲ್ಲಾಡಳಿತದ ವತಿಯಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ 300ರೂ ,2 ಸಾವಿರ ಟಿಕೇಟ್ ವ್ಯವಸ್ಥೆ ಮಾಡಲಾಗಿದೆ. 2000 ಟಿಕೇಟ್ ಪಡೆದವರಿಗೆ ಲಲಿತ ಮಹಲ್ ಯಿಂದ ಬೆಟ್ಟಕ್ಕೆ ಎಸಿ ಬಸ್ ನಲ್ಲಿ ಕರೆದುಕೊಂಡು ಹೋಗಿ ಬೆಟ್ಟದಲ್ಲಿ ನೇರವಾಗಿ ದರ್ಶನ ಮಾಡಿ ನಂತರ ಪ್ರಸಾದ ರೂಪದಲ್ಲಿ ಚಾಮುಂಡೇಶ್ವರಿ ವಿಗ್ರಹ, ಲಾಡು, ಕುಡಿಯುವ ನೀರಿನ ಬಾಟಲ್, ಒಂದು ಬ್ಯಾಗ್ ವಿತರಣೆ ಮಾಡಲಾಗುತ್ತಿದೆ.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…