Mysore
30
broken clouds

Social Media

ಬುಧವಾರ, 15 ಜುಲೈ 2026
Light
Dark

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ವಾಹನ ನಿಲುಗಡೆ ವ್ಯವಸ್ಥೆ, ಭಕ್ತರಿಗಾಗಿ ವಿಶೇಷ ಬಸ್ ಸೇವೆ, ಕುಡಿಯುವ ನೀರಿನ ವ್ಯವಸ್ಥೆ, ಸರತಿ ಸಾಲು (Queue) ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಶೌಚಾಲಯಗಳ ಸೌಲಭ್ಯಗಳನ್ನು ಸಚಿವರು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಆಷಾಢ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಎಲ್ಲಾ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ, ಸರತಿ ಸಾಲಿನ ವ್ಯವಸ್ಥೆ ಹಾಗೂ ಶೌಚಾಲಯಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಭಕ್ತರು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸಮಯಕ್ಕೆ ಮುನ್ನ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ರೂಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ CEO ಯುಕೇಶ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!