Mysore
21
overcast clouds
Light
Dark

ನಾಳೆ ʼಅಶ್ವಮೇಧʼ ಕ್ಲಾಸಿಕ್ ಬಸ್ಸುಗಳ ಲೋಕಾರ್ಪಣೆ ಸಮಾರಂಭ

ಮೈಸೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ‘ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ಸಮಾರಂಭವನ್ನು ಮಾ.02 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಅರಮನೆಯ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯ ಮೂಲಕ ತಿಳಿಸಿದ್ದು,  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹಾದೇವಪ್ಪ ರವರು ಬಸ್ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ