ಮೈಸೂರು

ಲೋಕ ಚುನಾವಣೆ: ಸಂಸದ ಪ್ರತಾಪ್‌ ಸಿಂಹ ಸ್ಪರ್ಧೆ ಕುರಿತು ಅಶ್ವಥ್‌ ನಾರಾಯಣ್‌ ಹೇಳಿದ್ದಿಷ್ಟು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಈ ಕುರಿತು ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯದಲ್ಲಿ ಯಾವುದು ನಿಶ್ಚಿತವಾಗಿ ಗೊತ್ತಿಲ್ಲ. ಪಕ್ಷದ ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಿರ್ಧರಿಸುವವರೆಗೆ ಎಲ್ಲರೂ ಕಾಯಬೇಕಾಗುತ್ತದೆ. ಪೊಲಿಟಿಕ್ಸ್‌ ತುಂಬಾ ಡೈನಾಮಿಕ್‌ ಆಗಿದ್ದು, ಸದ್ಯಕ್ಕೆ ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

ರಾಜಕೀಯದಲ್ಲಿ ಹೊಸ ಮುಖಕ್ಕೆ ಮಣೆ ಹಾಕುವುದು ಪಕ್ಷದಲ್ಲಿ ಸಾಮಾನ್ಯ. ಹೊಸ ಚಿಗುರು, ಹಳೆ ಬೇರು ಎಂಬುದು ನಡೆಯುತ್ತಲೇ ಇರುತ್ತದೆ. ರಾಜಕೀಯದಲ್ಲಿ ಇದೇ ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದರು.

ಜೊತಗೆ ಜಯದೇವ ಹೃದ್ರೋಗ ಸಂಸ್ಥೆ ನಿವೃತ್ತ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಅವರ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಡಾ. ಅಶ್ವಥ್‌ ನಾರಾಯಣ್‌, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಆಹ್ವಾನ ನೀಡಿದ್ದೇವೆ‌. ಅದರಲ್ಲಿ ಎರಡೂ ಮಾತಿಲ್ಲ. ಆದರೂ ದೊಡ್ಡವರ ಮಟ್ಟದಲ್ಲಿ ಏನು ನಿರ್ಧರಿಸುತ್ತಾರೆ ನನಗೆ ಗೊತ್ತಿಲ್ಲ. ರಾಜಕೀಯದಲ್ಲಿ ಯಾರಿಗೂ ಬಾಗಿಲು ಮುಚ್ಚುವುದಿಲ್ಲ ಎಂದು ಇದೇ ವೇಳೆ ಮಾಜಿ ಡಿಸಿಎಂ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago