Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಾತೃಶ್ರೀ ಸಂಸ್ಕೃತ ಪಾಠಶಾಲೆ ವತಿಯಿಂದ ಅಸ್ಮಾಕಂ ಸಂಸ್ಕೃತಂ ಸರಣಿ ಕಾರ್ಯಕ್ರಮ

ಮೈಸೂರು: ಮೈಸೂರು ತಾಲ್ಲೂಕಿನ ಪುಟ್ಟೇಗೌಡನಹುಂಡಿ ಗ್ರಾಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಹಾಗು ಅರುಣೋದಯ ವಿದ್ಯಾ ಸಂಸ್ಥೆ ದೇವಲಾಪುರ ಹಾಗೂ ಪುಟ್ಟೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಮೊದಲು ಶಾಲೆಯ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಸ್ಕೃತ ನಾಮಫಲಕಗಳೊಂದಿಗೆ ಜಾಥಾ ನಡೆಸಿದರು.

ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಕುಮುದ ಅವರು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ನಟರಾಜ ಬಿ.ಎಡ್.ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್‌ ಅವರು, ಸಂಸ್ಕೃತವು ಪ್ರಪಂಚದ ಅತ್ಯಂತ ಹಳೆಯ ಪ್ರಸಿದ್ಧ ಭಾಷೆಗಳಲ್ಲಿ ಒಂದಾಗಿದೆ. ಯಾವುದೇ ವಿಷಯವನ್ನು ಅಧ್ಯಯನ ಮಾಡಬೇಕೆಂದರೆ ಸಂಸ್ಕೃತ ಭಾಷೆ ಬೇಕು ಎಂದರು.

ಅರುಣೋದಯ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಎಂ.ಸಿದ್ದರಾಜು ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರಂಜನ್‌ ಮೂರ್ತಿ, ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್‌ ಎಚ್.ಆರ್‌ ಸೇರಿದಂತೆ ಸಹಶಿಕ್ಷಕರುಗಳು ಹಾಜರಿದ್ದರು.

 

Tags: