ಮೈಸೂರು: ಮೈಸೂರು ತಾಲ್ಲೂಕಿನ ಪುಟ್ಟೇಗೌಡನಹುಂಡಿ ಗ್ರಾಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಹಾಗು ಅರುಣೋದಯ ವಿದ್ಯಾ ಸಂಸ್ಥೆ ದೇವಲಾಪುರ ಹಾಗೂ ಪುಟ್ಟೇಗೌಡನಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಮೊದಲು ಶಾಲೆಯ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಸ್ಕೃತ ನಾಮಫಲಕಗಳೊಂದಿಗೆ ಜಾಥಾ ನಡೆಸಿದರು.
ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಕುಮುದ ಅವರು, ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ನಟರಾಜ ಬಿ.ಎಡ್.ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಅವರು, ಸಂಸ್ಕೃತವು ಪ್ರಪಂಚದ ಅತ್ಯಂತ ಹಳೆಯ ಪ್ರಸಿದ್ಧ ಭಾಷೆಗಳಲ್ಲಿ ಒಂದಾಗಿದೆ. ಯಾವುದೇ ವಿಷಯವನ್ನು ಅಧ್ಯಯನ ಮಾಡಬೇಕೆಂದರೆ ಸಂಸ್ಕೃತ ಭಾಷೆ ಬೇಕು ಎಂದರು.
ಅರುಣೋದಯ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಎಂ.ಸಿದ್ದರಾಜು ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರಂಜನ್ ಮೂರ್ತಿ, ಮಾತೃಶ್ರೀ ಸಂಸ್ಕೃತ ಪಾಠ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಎಚ್.ಆರ್ ಸೇರಿದಂತೆ ಸಹಶಿಕ್ಷಕರುಗಳು ಹಾಜರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…