Mysore
28
few clouds

Social Media

ಗುರುವಾರ, 16 ಜನವರಿ 2025
Light
Dark

ನಂಜನಗೂಡಿನಲ್ಲಿ ಹರಕೆಗೆ ಬಿಟ್ಟಿದ್ದ ಹಸುವಿನ ಬಾಲಕ್ಕೆ ಮಚ್ಚಿನೇಟು

ಮೈಸೂರು: ಚಾಮರಾಜನಗರದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲದ ಮೇಲೆ ಮಚ್ಚು ಬೀಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಬಳಿ ಕಳೆದ ರಾತ್ರಿ ಈ ಅಮಾನವೀಯ ಘಟನೆ ನಡೆದಿದೆ.

ನಂಜುಂಡೇಶ್ವರ ದೇವಾಲಯಕ್ಕೆ ಭಕ್ತರು ಹರಕೆ ರೂಪದಲ್ಲಿ ಹಸುಗಳನ್ನು ಧಾನವಾಗಿ ನೀಡಿದ್ದರು. ಈ ಹಸು ರಸ್ತೆಯಲ್ಲಿ ನಿಂತಿರುವಾಗ ಗೋವು ಕಳ್ಳರು ಕಳ್ಳತನ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಮಚ್ಚಿನಿಂದ ಹಸುವಿನ ಮೇಲೆ ಹಲ್ಲೆ ಮಾಡಿದ್ದಾರೆ.

ಹಸುವಿನ ಬಾಲಕ್ಕೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಸುಮ್ಮನೆ ಬಿಡಬಾರದು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: