ಮೈಸೂರು

ವಸತಿ ಶಾಲೆ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು: ಕಾರಣ ಇಷ್ಟೇ

ನಂಜನಗೂಡು: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇಂದು ಬೆಳಿಗ್ಗೆಯಿಂದಲೇ ಉಪಾಹಾರವನ್ನು ಸೇವಿಸದೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಮೆನು ಚಾರ್ಟ್ ಪ್ರಕಾರ ಊಟ ನೀಡುತ್ತಿಲ್ಲ. ಸ್ವಚ್ಛತೆಯಂತೂ ಇಲ್ಲವೇ ಇಲ್ಲ. ನಮಗೆಲ್ಲಾ ಹಳಸಿದ ಅನ್ನ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಊಟವನ್ನೇ ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಪೋಷಕರು ಕೂಡ ವಿದ್ಯಾರ್ಥಿಗಳಿಗೆ ಸಾಥ್‌ ನೀಡಿದ್ದು, ಪ್ರಾಂಶುಪಾಲೆ ವಸಂತ ಕುಮಾರಿ, ನಿಲಯ ಪಾಲಕ ಮಹದೇವಪ್ಪ, ಅತಿಥಿ ಶಿಕ್ಷಕ ಗುರುಸ್ವಾಮಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಮಾನತುಪಡಿಸುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇನ್ನು ಈ ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿ ತನಕ ಒಟ್ಟು 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ಮೂಲಭೂತ ಸೌಕರ್ಯ ಮರೀಚಿಕೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

10 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

10 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

11 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

12 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

12 hours ago