ಮೈಸೂರು: ಹೆಜ್ಜೇನು ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ.
ಪುಟ್ಟರಾಜು ಎಂಬುವವರೇ ಹೆಜ್ಜೇನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪುಟ್ಟರಾಜು ಅವರು ದನ ಮೇಯಿಸಲು ಜಮೀನಿಗೆ ಹೋದಾಗ ಜೇನುನೊಣಗಳು ದಾಳಿ ನಡೆದಿವೆ. ಈ ವೇಳೆ ಅವರಿಗೆ ಓಡಿ ಹೋಗಲು ಸಾಧ್ಯವಾಗಿಲ್ಲ.
ಪುಟ್ಟರಾಜು ಅವರ ಕೂಗಾಟದಿಂದ ರಕ್ಷಣೆಗೆ ಧಾವಿಸಿದ ಸಹೋದರ ಪುಟ್ಟರಾಜು ಹಾಗೂ ಅವರ ಸಂಬಂಧಿ ಮಲ್ಲಿಕಾರ್ಜುನ ಎಂಬುವವರಿಗೂ ಸಹ ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗಳಾಗಿವೆ.
ಮೂವರನ್ನು ಪಿರಿಯಾಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪುಟ್ಟರಾಜು ಮೃತಪಟ್ಟಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…