ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ವಿರೋಧ ಪಕ್ಷಗಳು ಸುಳ್ಳು ಆರೋಪಗಳ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮುಖ್ಯ ಟಾರ್ಗೆಟ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಡ್ಡಗಾಲಾಗಿ ಇರುವುದರಿಂದ ಮೊದಲು ಅವರನ್ನು ಮುಗಿಸಲು ಇಲ್ಲಸಲ್ಲದ ಆರೋಪಗಳ ಮಾಡಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಸ್ನೇಹಿ ಆಗಿರುವ, ಜನರಿಂದ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರವನ್ನು ಹೇಗಾದರು ಮುಗಿಸುವ ಮೂಲಕ ಅಧಿಕಾರಕ್ಕೆ ಬರಬೇಕು ಎನ್ನುವುದು ಬಿಜೆಪಿಯ ಕುತಂತ್ರ. ಸಿಎಂ ತಪ್ಪು ಮಾಡದಿದ್ರು ತನಿಖಾ ಸಂಸ್ಥೆಗಳನ್ನು ದೂರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ರಾಜೀನಾಮೆಗೆ ಯತ್ನಿಸುತ್ತಿವೆ ಎಂದರು.
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…