ಮೈಸೂರು

ಸುಳ್ಳು ಆರೋಪ ಮೂಲಕ ಸಿಎಂ ಅಸ್ಥಿರಕ್ಕೆ ಯತ್ನ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ವಿರೋಧ ಪಕ್ಷಗಳು ಸುಳ್ಳು ಆರೋಪಗಳ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮುಖ್ಯ ಟಾರ್ಗೆಟ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಅದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಡ್ಡಗಾಲಾಗಿ ಇರುವುದರಿಂದ ಮೊದಲು ಅವರನ್ನು ಮುಗಿಸಲು ಇಲ್ಲಸಲ್ಲದ ಆರೋಪಗಳ ಮಾಡಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಸ್ನೇಹಿ ಆಗಿರುವ, ಜನರಿಂದ ರಚನೆ ಆಗಿರುವ ಕಾಂಗ್ರೆಸ್‌ ಸರ್ಕಾರವನ್ನು ಹೇಗಾದರು ಮುಗಿಸುವ ಮೂಲಕ ಅಧಿಕಾರಕ್ಕೆ ಬರಬೇಕು ಎನ್ನುವುದು ಬಿಜೆಪಿಯ ಕುತಂತ್ರ.  ಸಿಎಂ ತಪ್ಪು ಮಾಡದಿದ್ರು ತನಿಖಾ ಸಂಸ್ಥೆಗಳನ್ನು ದೂರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ರಾಜೀನಾಮೆಗೆ ಯತ್ನಿಸುತ್ತಿವೆ ಎಂದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

6 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

6 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

13 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

13 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

13 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

13 hours ago