Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ರೈತರು ಪೊಲೀಸ್ ವಶಕ್ಕೆ

ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿ 50ಕ್ಕೂ ಹೆಚ್ಚು ರೈತರನ್ನು ವಶಕ್ಕೆ ಪಡೆಯಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ದಮನ ಎಂದು ರೈತರು ಪೊಲೀಸರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆ ರೈತ ಮುಖಂಡ ಕುರುಬೂರು ಶಾಂತಕುಮಾರ್, ಮಹಿಳೆಯರು ಸೇರಿ ರೈತರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರ ಕ್ರಮಕ್ಕೆ ಕುರುಬೂರು ಶಾಂತಕುಮಾರ್ ಹಾಗೂ ರೈತರು ರಸ್ತೆಯಲ್ಲಿ ಮಲಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಬಲವಂತವಾಗಿ ರೈತರನ್ನು ಪೊಲೀಸರು ವಶಕ್ಕೆ ಪಡೆದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!