Mysore
14
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ವಿದ್ಯಾರ್ಥಿಗಳೆ ಗಮನಿಸಿ.! ವಿದ್ಯಾಭ್ಯಾಸ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೈಸೂರು: 2024-25 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ)ದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via/CET/NEET ಮುಖಾಂತರ) ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಬಿ.ಇ/ ಬಿ.ಟೆಕ್, ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್ ಹಾಗೂ ವೆಟರ್‌ನರಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. CET/NEET ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗಮದ ವೆಬ್‌ಸೈಟ್ https://kmdconline.karnataka.gov.in/ ಮೂಲಕ ಜುಲೈ 7 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟ್‌ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್‌ಕಾರ್ಡ್, ಫೋಟೋ 4, ಸಿಇಟಿ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಭರತ್‌ನಗರದ ಮೌಲಾನ ಆಜಾ಼ದ್ ಭವನದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) 1ನೇ ಮಹಡಿಯ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂ: 0821-2430080 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ತಿಳಿಸಿದೆ.

Tags:
error: Content is protected !!