ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಟಾ ಎಸಿ ಗೂಡ್ಸ್ ಗಾಡಿಯ ಚಾಲಕ ನಾಗಣಾಪುರದ ಶಿವಕುಮಾರ್ ತನಗೆ ಸಾಲ ನೀಡಿದ ಮಹದೇವನಗರದ ರವಿ ಮನೆ ಮುಂದೆ ಆತ್ನಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ
ಮಹದೇವನಗರದ ರವಿಗೆ ಶಿವಕುಮಾರ್ 5 ಸಾವಿರ ಸಾಲ ನೀಡಬೇಕಿತ್ತು. ಹಣ ಹಿಂದಿರುಗಿಸಲು ಶಿವಕುಮಾರ್ ಸಮಯ ಕೇಳಿದ್ದ.ಆದರೆ ರವಿ ಆಗಾಗ ಹಣಕ್ಕಾಗಿ ಪೀಡಿಸುತ್ತಿದ್ದ. ಭಾನುವಾರ ಮಧ್ಯಾಹ್ನ ಶಿವಕುಮಾರ್ ತನ್ನ ಸ್ನೇಹಿತನ ಸ್ಕೂಟರ್ ತಂದು ಯಡಿಯಾಲ ಬಸ್ ಸ್ಟಾಪ್ ಬಳಿ ನಿಂತಿದ್ದ.ಅಲ್ಲಿಗೆ ಬಂದ ರವಿ ಹಣಕ್ಕಾಗಿ ಪೀಡಿಸಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ಸ್ನೇಹಿತನಿಂದ ತಂದಿದ್ದ ಸ್ಕೂಟರ್ ಬಲವಂತವಾಗಿ ಕಿತ್ತುಕೊಂಡು ಹೋಗಿದ್ದಾನೆ. ಇದರಿಂದ ಮನನೊಂದ ಶಿವಕುಮಾರ್ ಜಮೀನಿಗೆ ಸಿಂಪಡಿಸುವ ಔಷಧಿಯೊಂದಿಗೆ ರವಿ ಮನೆ ಮುಂದೆ ಬಂದು ತನ್ನ ಸಾವಿಗೆ ರವಿ ಕಾರಣ ಎಂದು ಹೇಳಿ ಸೆಲ್ಪಿ ವಿಡಿಯೋ ಮಾಡಿ ಅದನ್ನು ಜಾಲತಾಣಕ್ಕೆ ಹರಿಬಿಟ್ಟು ವಿಷ ಸೇವಿಸಿದ್ದಾನೆ.
ವಿಷಕುಡಿದು ಅಸ್ವಸ್ಥನಾಗಿದ್ದ ಶಿವಕುಮಾರ್ ನನ್ನು ಸರಗೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…