Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮಾನವ ಸರಪಳಿ ಮೂಲಕ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ಕುರಿತು ಜಾಗೃತಿ

ಮೈಸೂರು : ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಪ್ರತಿಜ್ಞೆ ಸ್ವೀಕಾರ ಹಾಗೂ ಮಾನವ ಸರಪಳಿ ಮಾಡುವ ಮೂಲಕ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧದ ದಿನದ ಅಂಗವಾಗಿ ಮೈಸೂರು ಪುಷ್ಪಾಂಜಲಿ ಸೇವಾ ಸಂಸ್ಥೆ ಮತ್ತು ಅಗರ್ವಾಲ್ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಎನ್.ಕೆ ಲೋಕನಾಥ್ ಹಾಗೂ ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಎನ್‌.ಸಿ.ಬಿ ವಲಯ ನಿರ್ದೇಶಕರಾದ ಎಸ್.ಕೆ ಮಿಶ್ರರವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಎನ್.ಸಿ.ಸಿ ಕೆಡೆಟ್ ಗಳು, ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳು ಮಹಾವೀರ ವಿದ್ಯಾಸಂಸ್ಥೆ, ಗೋಪಾಲಸ್ವಾಮಿ ಕಾಲೇಜು, ವಾಗ್ದೇವಿ ವಿದ್ಯಾಲಯ, ಗೀತಾ ಶಿಶು ಶಿಕ್ಷಣ ಸಂಸ್ಥೆ, ಸೇರಿದಂತೆ ಇನ್ನಿತರ ಕಾಲೇಜಿನ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗಿಯಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಅಗರ್ವಾಲ್ ಸಂಸ್ಥೆಯ ಮುಖ್ಯಸ್ಥ ಡಾ.ಎಸ್.ಕೆ ಮಿತ್ತಲ್ , ಚೇತನ್ ಗಿರಿ ಮಹಾರಾಜ್ ಸ್ವಾಮೀಜಿ, ಎನ್.ಸಿ.ಸಿ ಗ್ರೂಪ್ ಕಮಾಂಡರ್ ಕರ್ನಲ್ ರೋಹಿತ್ ಠಾಕೂರ್ , ಉಚ್ಚ ಶಿಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ದತ್ತಾತ್ರೇಯ ಸಿಂಧೆ, ನವೀನ ಗುಪ್ತ, ಹರಿ ಸಿಂಗ್ ಲಂಬ, ಅಜಯ್ ಶಾಸ್ತ್ರಿ ಸೇರಿದಂತೆ ಇನ್ನಿತರ ಮುಖಂಡರುಗಳ ಭಾಗಿಯಾಗಿದ್ದರು.

Tags: