ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು.
ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ ಬೆಳೆಸಿ ಎಂಬ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,
ಪರಿಸರದ ಮುಖ್ಯವಾದ ಅಂಶಗಳೆಂದರೆ ಗಾಳಿ, ನೀರು, ಮಣ್ಣು, ಅರಣ್ಯ , ಇತ್ಯಾದಿಗಳು ಯಾವುದೇ ಅಡೆತಡೆಯಿಲ್ಲದ ಉಳಿಯುವುದು ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರದ ಸಂರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದ ಪರಿಸರ ಪರಿಸ್ಥಿತಿಗಳು ಬಿಗಡಾಯಿಸುತ್ತಿದೆ. ಹಾಗಾಗಿ ರಕ್ಷಣೆ ಮತ್ತು ಸುಸ್ಥಿರ ಬಳಕೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ. ನಮ್ಮ ಸುತ್ತಲಿನ ಪರಿಸರ ಎಷ್ಟು ಚೆನ್ನಾಗಿರುತ್ತೆ ಅಷ್ಟು ನಾವು ಆರೋಗ್ಯವಾಗಿರುತ್ತೇವೆ. ಪರಿಸರ ಹಾಳಾದಷ್ಟು ನಮ್ಮ ಆರೋಗ್ಯ ಹಾಳಾಗುತ್ತದೆ. ಎಂದರು..
ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ ಸುಹಾಸಿನಿ ದಿನೇಶ್, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿದ್ದರಾಜು , ಸರ್ಕಾರಿ ಮಹಿಳಾ ಪ್ರೌಢಶಾಲೆ ಉಪಪ್ರಾಂಶುಪಾಲ ವಿ.ಸಿ ಮಂಜುನಾಥ್ ಹಾಗೂ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…