ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು.
ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ವ್ಯಸನ ಮಾನಸಿಕ ಕಾಯಿಲೆಯಾಗಿದ್ದು, ಇದರ ವಿರುದ್ಧ ಎಚ್ಚರದಿಂದಿರುವಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು ಬಹಳ ಮುಖ್ಯವಾಗಿದೆ. ಮಾದಕ ವಸ್ತು ಸೇವನೆ, ಸಮಾಜದಲ್ಲಿ ಶಾಂತಿ ಕದಡಿ ಅಶಾಂತಿಗೆ ದಾರಿಮಾಡಿಕೊಡುತ್ತದೆ. ಹಾಗಾಗಿ ಯುವಜನತೆ ಇದರಿಂದ ದೂರವಿರಬೇಕು ಹಾಗೂ ಈ ಮಾದಕ ದುಶ್ಚಟಕ್ಕೆ ಬಲಿಯಾದವರನ್ನು ಸರಿದಾರಿಗೆ ತರುವ ಕೆಲಸದಲ್ಲಿ ತೊಡಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿಗಳು ಯಾವುದೇ ಸಮಸ್ಯೆಯಾಗಲಿ ತುರ್ತು ಸಂದರ್ಭದಲ್ಲಿ ನಮ್ಮ ಇಲಾಖೆಯ ೧೧೨ಗೆ ಕರೆ ಮಾಡಿ ಜೊತೆಗೆ ತಮ್ಮ ಸುತ್ತಮುತ್ತ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕಾನೂನು ಅರಿವು ಮತ್ತು ನೆರವು ಸಿಗುವ ಬಗ್ಗೆ ಮಾಹಿತಿಯನ್ನು ನೀಡಿ ಪೊಲೀಸ್ ಇಲಾಖೆಯ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಂತರಸಂತೆ ಪದಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೈನಾ, ಅಂತರಸಂತೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಂದರಮ್ಮ. ಶಿಕ್ಷಕರಾದ ನಾರಾಯಣಸ್ವಾಮಿ,ಹರ್ಷ, ಶರೀನ, ಲಲಿತ, ಕಾಳಿಂಗೇಗೌಡ, ಕೆಂಚನಹಳ್ಳಿಯ ಮುಖ್ಯ ಶಿಕ್ಷಕ ಸ್ವಾಮಿ, ಅಂತರ ಸಂತೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಾಣೆ ಬರಹಗಾರರ ಶ್ರೀಕಂಠ ಸ್ವಾಮಿ, ಗೋಪಾಲಕೃಷ್ಣ, ಚಂದ್ರು, ರಾಮಕೃಷ್ಣ, ಕೃಷ್ಣ ಸೇರಿದಂತೆ ಇತರರು ಹಾಜರಿದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…