ಮೈಸೂರು

ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಬಿಡುಗಡೆ: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ಅಯೂಬ್‌ ಖಾನ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಕರ್ನಾಟಕ ವಸ್ತು ಪ್ರದರ್ಶನದ ಅಧ್ಯಕ್ಷ ಅಯೂಬ್‌ ಖಾನ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನನ್ನ ಮೇಲೆ ನಂಬಿಕೆಯನ್ನಿಟ್ಟು, ನನ್ನನ್ನು ಪ್ರಾಧಿಕಾರದ ಅಧ್ಯಕ್ಷನಾಗಿ ಮಾಡಿದಲ್ಲದೇ ಪ್ರಾಧಿಕಾರದ ಅಭಿವೃದ್ಧಿಗಾಗಿ 20 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ವರ್ಷದ 365 ದಿನಗಳ ಕಾಲ ವಸ್ತು ಪ್ರದರ್ಶನ ಆಯೋಜಿಸುವ ಉದ್ದೇಶವನ್ನಿಟ್ಟುಕೊಂಡು ನಾವು ಸಿಎಂ ಗಮನಕ್ಕೆ ಈ ಯೋಜನೆಯ ಬಗ್ಗೆ ಪ್ರಸ್ತಾವನೆ ನೀಡಿದ್ದೇವು. ಇದಕ್ಕೆ ಅವರು ಸಕರಾತ್ಮಕವಾಗಿ ಪ್ರತಿಕ್ರಿಯಿಸಿ 20 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ವಸ್ತು ಪ್ರದರ್ಶನದ ಎ.ಬ್ಲಾಕ್ ನಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಬೇಲೂರು ಮತ್ತು ಹಳೇಬೀಡು ಮಾದರಿಯ ಕಟ್ಟಡ ನಿರ್ಮಾಣ ಮಾಡುವ ಯೋಜನೆ ತಯಾರಿಸಿದ್ದೇವೆ. ಅಲ್ಲಿ ವಾಟರ್ ಪೌಂಟೇನ್ ಸಹ ಇರುತ್ತದೆ. ಅಲ್ಲಿ ಈಗಾಗಲೇ 154 ಅಂಗಡಿ ಮಳಿಗೆಗಳು ಇವೆ. ನಮ್ಮ ಯೋಜನೆಗಳನ್ನ ಒಪ್ಪಿ ನಮಗೆ 20 ಕೋಟಿ ರೂ.ಗಳನ್ನು ನೀಡಿರುವುದಕ್ಕೆ ಮೈಸೂರಿನ ಜನತೆಯ ಪರವಾಗಿ ಹಾಗೂ ಪ್ರಾಧಿಕಾರದ ಪರವಾಗಿ ಸಿಎಂ ಸಿದ್ದರಾಮಯ್ಯರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲೂ ವಸ್ತು ಪ್ರದರ್ಶನ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಅಲ್ಲಿನ ಸ್ಥಳೀಯ ಜಿಲ್ಲಾಡಳಿತದೊಂದಿಗೆ ಸಭೆ ಕರೆದು ಅಲ್ಲೂ ಕೂಡ ವಸ್ತು ಪ್ರದರ್ಶನ ಆಯೋಜನೆ ಮಾಡುವ ಸಲುವಾಗ ಕೆಲಸ ಮಾಡುತ್ತೇವೆ. ಇನ್ನು ಮುಂಬರುವ ದಸರಾ ವಸ್ತು ಪ್ರದರ್ಶನ ಒಳಗೆ ಕಾಮಗಾರಿ ಮುಗಿಸುವ ಯೋಜನೆ ಇದೆ ಎಂದರು.

ಅರ್ಚನ ಎಸ್‌ ಎಸ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

7 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

8 hours ago