ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಅಭಿಮಾನಿಗಳು ಹಾಗೂ ಡಿಕೆಶಿ ಪರ ಇರುವ ಶಾಸಕರು ಪದೇ ಪದೇ ಆಗ್ರಹಿಸುತ್ತಲೇ ಬಂದಿದ್ದಾರೆ.
ಇದನ್ನು ಓದಿ: ರಾಜಕೀಯ ಗೊಂದಲಗಳಿಗೆ ಹೈಕಮಾಂಡ್ ಕೊನೆ ಆಡಬೇಕು: ಸಿಎಂ ಸಿದ್ದರಾಮಯ್ಯ
ಕುರ್ಚಿ ಕದನದ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ಡಿಸಿಎಂ ಡಿಕೆಶಿ ಅಭಿಮಾನಿಗಳು ಟೆಂಪಲ್ ರನ್ ಮುಂದುವರಿಸಿದ್ದ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಪದೇ ಪದೇ ಆಗ್ರಹಿಸುತ್ತಿದ್ದಾರೆ.
ಈ ಬೆನ್ನಲ್ಲೇ ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಅಯ್ಯಪ್ಪ ಮಾಲಾಧಾರಿಗಳು ಕೇರಳದ ಶಬರಿಮಲೆಗೆ ತೆರಳಿ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಲಿ ಎಂದು ಪ್ರಾರ್ಥಿಸಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಪೂರ್ಣಗೊಳಿಸಲೆಂದು ವಿಶೇಷ ಪೂಜೆ ಸಲ್ಲಿಸಿದ್ದು, ಸಿದ್ದರಾಮಯ್ಯ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲೆಂದು ಅಯ್ಯಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.





