ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ ಹಾಕಿದ್ದ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ನಾಮಫಲಕ ಇದಾಗಿದ್ದು, ಘಟನೆ ನಡೆಯುತ್ತಿದ್ದಂತೆ ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಮಾತನಾಡಿದ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.