ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಮತ್ತು ಡಿಸೇಲ್ ಅಬಕಾರಿ ಸುಂಕವನ್ನು 2 ರೂ.ಹೆಚ್ಚಳ ಮಾಡಿದೆ. ಈ ವಿಚಾರಗಳ ಬಗ್ಗೆ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಮಾರಕಟ್ಟೆಯಲ್ಲಿ ಕಚ್ಚಾ ತೈಲದಲ್ಲಿ ಬೆಲೆ ಹೆಚ್ಚಾಗಿದ್ದರಿಂದ ನಮ್ಮ ದೇಶದಲ್ಲೂ ಗ್ಯಾಸ್, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಸಿದೆ. ಆದರೆ ಈ ಬೆಲೆಯಿಂದ ದೇಶದ ಜನತೆಗೆ ಹೊರೆಯಾಗಲ್ಲವೆಂದು ಕೇಂದ್ರ ಸರ್ಕಾರವವೇ ಸ್ಪಷ್ಟನೆ ನೀಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ದೇಶದ ಕಡುಬಬಡವರು ಕೂಡ ಗ್ಯಾಸ್ ಬಳಸಬೇಕೆಂಬ ಹಿತದೃಷ್ಟಿಯಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಅನುಷ್ಠಾನಗೊಳಿಸಿದರು. ಉಜ್ವಲ ಯೋಜನೆ ಗ್ಯಾಸ್ ಸಿಲಿಂಡರ್ 503 ಇದಿದ್ದು 553 ಆಗಿದೆ. ಇನ್ನೂ ಜನ ಸಾಮಾನ್ಯರು ಬಳಸುವಂತಹ ಸಿಲಿಂಡರ್ 803 ಇದ್ದದ್ದು 853 ರೂ. ಆಗಿದೆ. ನಾನು ರಾಜ್ಯದ ಜನತೆಗೆ ಗಮನಕ್ಕೆ ತರುವುದೇನೆಂದರೆ 2023ರ ಮಾರ್ಚ್‌ನಲ್ಲಿ ಒಂದು ಸಿಲಿಂಡರ್‌ನ ಬೆಲೆ 1,107 ರೂ. ಇತ್ತು. ಆದರೆ ಇಂದು ಬೆಲೆ ಏರಿಕೆಯಾಗಿದ್ದರೂ ಪ್ರತಿ ಸಿಲಿಂಡರ್‌ಗೆ 853 ರೂ. ಇದೆ.ಒಂದು ವೇಳೆ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ಗ್ಯಾಸ್ ಬೆಲೆ 2500 ಇರುತ್ತಿತ್ತು. ಮೋದಿ ಇರುವ ಕಾರಣ 850 ರೂ ಇದೆ ಎಂದು ಹೇಳಿದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…