ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.
ಮೈಸೂರಿನಲ್ಲಿ ಇಂದು(ಏಪ್ರಿಲ್.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳಾದ ಹಾಲು, ನೀರು, ಕಸ ಸೇರಿದಂತೆ 48 ಪದಾರ್ಥಗಳ ಮೇಲೆ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಎಸಿ ರೂಮ್ ಬಿಟ್ಟು ರಾಜ್ಯ ಪ್ರವಾಸ ಮಾಡಿ ಜನತೆಯ ಅಭಿಪ್ರಾಯಗಳನ್ನು ಪಡೆದರೆ ಉತ್ತಮ ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿರುವುದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಏರಿಕೆಯಾಗಿರುವುದಕ್ಕೆ. ಆದರೆ ನೀವು ಯಾಕೆ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಹಾಲಿನ ಮೇಲೆ ದರ ಏರಿಕೆ ಮಾಡಿದ್ದೀರಿ? ಅಲ್ಲದೇ ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಅಗತ್ಯ ವಸ್ತುಗಳ ಮೇಲೆ ಯಾಕೆ ದರ ಏರಿಕೆ ಮಾಡಿದ್ದೀರಾ? ಅವುಗಳೇನೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿಗುವಂತಹ ವಸ್ತುಗಳಾ? ನಿಜವಾಗಿಯೂ ಜನತೆಗೆ ಕಪಾಳ ಮೋಕ್ಷ ಮಾಡುತ್ತಿರುವುದು ನೀವೂ, ಕೇಂದ್ರ ಸರ್ಕಾರವಲ್ಲ ಎಂದು ವಾಗ್ದಾಳಿ ನಡೆಸಿದರು.
ಪ್ರತಿ ತಿಂಗಳು 1 ತಾರೀಖಿನಂದು ಪೊಲೀಸ್ ಇಲಾಖೆ ವೇತನ ಆಗಬೇಕಿತ್ತು. ಆದರೆ ಇನ್ನೂ ರಾಜ್ಯ ಸರ್ಕಾರ ಸಂಬಳ ಹಾಕಿಲ್ಲ. ಅಲ್ಲದೇ ಅದೊಂದು ಇಲಾಖೆಯಲ್ಲಿ ಮಾತ್ರವಲ್ಲ, ಸರ್ಕಾರಿ ನೌಕರರಿಗೆ, ಶಿಕ್ಷಕರಿಗೆ ವೇತನ ನೀಡಿಲ್ಲ. ಹೀಗಾಗಿಯೇ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ಅದಕ್ಕೆ ದರ ಏರಿಕೆಯೇ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…