ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರಯುಕ್ತ ಅಶೋಕಪುರಂ ಭಾಗದ ಉದ್ಯಾನವನದಲ್ಲಿ ಹಾಗೂ ಮೈಸೂರಿನ ಟೌನ್ ಹಾಲ್ ನಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮೈಸೂರು-ಕೊಡಗು ಲೋಕಸಭೆಯ ಮೈತ್ರಿ ಅಭ್ಯರ್ಥಿ ಯದುವೀರ್ ಮಾಲಾಪಣೆ ಮಾಡಿ ಗೌರವ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ರಂಗೋಲಿಯಿಂಂ ಬಿಡಿಸಿದ್ದ 60×160 ಅಡಿಯ ಅಂಬೇಡ್ಕರ್ ಅವರ ಭಾವಚಿತ್ರ ಬಿಡಸುವ ಮೂಲಕ ಗೌರವ ಸೂಚಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಬಿಜೆಪಿ ನಗರಾಧ್ಯಕ್ಷರಾದ ನಾಗೇಂದ್ರ, ಮಾಜಿ ಶಾಸಕ ಎಸ್.ಎ.ರಾಮದಾಸ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಹಾಜರಿದ್ದರು.