Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಮೈಸೂರಿಗೆ ಅಮಿತ್‌ ಶಾ ಪ್ರವಾಸ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ನಾಳೆ ನಿರ್ಬಂಧ!

ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತರಾದ ಡಾ. ರಮೇಶ್‌ ಬಾನೋತ್‌ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಇಂದು (ಫೆ.10) ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡಿ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮದ ಅಂಗವಾಗಿ ವಿಐಪಿ ಮೂಮೆಂಟ್ಸ್‌ ಇರುವ ಕಾರಣ ಸೆಕ್ಯೂರಿಟಿ ಹಿನ್ನೆಲೆಯಲ್ಲಿ ಕೆಲ ಸಮಯ ಅಲ್ಪಮಟ್ಟಿನ ನಿರ್ಬಂಧ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ರಮೇಶ್‌ ಬಾನೋತ್‌ ತಿಳಿಸಿದ್ದಾರೆ.

ನಾಳೆ ಬೆಳಗ್ಗೆ ೧೦ ರಿಂದ ೧೧. ೩೦ ರ ತನಕ ಸಾರ್ವಜನಿಕರಿಗೆ ಬೆಟ್ಟಕ್ಕೆ ತೆರಳಲು ನಿರ್ಬಂಧವಿರುತ್ತದೆ. ಈ ಸಮಯ ಹೊರತು ಪಡಿಸಿದ ಬಳಿಕ ಎಂದಿನಂತೆ ಭಕ್ತರು ಬೆಟ್ಟಕ್ಕೆ ತೆರಳಬಹುದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ