ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಡಾ. ರಮೇಶ್ ಬಾನೋತ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಂದು (ಫೆ.10) ರಾತ್ರಿ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡ ದೇವತೆ ಚಾಮುಂಡಿ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮದ ಅಂಗವಾಗಿ ವಿಐಪಿ ಮೂಮೆಂಟ್ಸ್ ಇರುವ ಕಾರಣ ಸೆಕ್ಯೂರಿಟಿ ಹಿನ್ನೆಲೆಯಲ್ಲಿ ಕೆಲ ಸಮಯ ಅಲ್ಪಮಟ್ಟಿನ ನಿರ್ಬಂಧ ವಿಧಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ರಮೇಶ್ ಬಾನೋತ್ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ ೧೦ ರಿಂದ ೧೧. ೩೦ ರ ತನಕ ಸಾರ್ವಜನಿಕರಿಗೆ ಬೆಟ್ಟಕ್ಕೆ ತೆರಳಲು ನಿರ್ಬಂಧವಿರುತ್ತದೆ. ಈ ಸಮಯ ಹೊರತು ಪಡಿಸಿದ ಬಳಿಕ ಎಂದಿನಂತೆ ಭಕ್ತರು ಬೆಟ್ಟಕ್ಕೆ ತೆರಳಬಹುದಾಗಿದೆ.
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ…
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ…