Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಕಬಿನಿ ಜಲಾಶಯ ಬಗೆಹರಿಸಿದೆ: ಸಿಎಂ ಸಿದ್ದರಾಮಯ್ಯ ಸಂತಸ

ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಕೆಆರ್‌ಎಸ್‌, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನೂ ಕಾವೇರಿ ನದಿ ನೀರು ವಿವಾದದಿಂದ ತಮಿಳುನಾಡು ಸರ್ಕಾರ ಹಾಗೂ ನಮಗೆ ಭಾರೀ ಸಮಸ್ಯೆ ಉಂಟಾಗಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ 47 ಟಿಎಂಸಿ ನೀರು ಬಿಡಲು ಆದೇಶ ನೀಡಲಾಗಿತ್ತು. ತಮಿಳುನಾಡಿಗೆ ಈಗಾಗಲೇ 80 ಟಿಎಂಸಿಗೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾವೇರಿ ವಿವಾದದ ಬಗ್ಗೆ ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ 66 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಆಗಿದೆ. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ. ಈ ಬಾರಿಯಾದರೂ ಅನ್ನದಾತರ ಬದುಕು ಹಸನಾಗಲಿದೆ ಎಂದು ಖುಷಿಪಟ್ಟರು.

Tags:
error: Content is protected !!