ಎಚ್.ಡಿ.ಕೋಟೆ: ಕಬಿನಿ ಜಲಾಶಯ ಭರ್ತಿಯಾಗಿ ತಮಿಳುನಾಡಿಗೂ, ನಮಗೂ ಉಂಟಾಗಿದ್ದ ಸಮಸ್ಯೆಯನ್ನು ಬಗೆಹರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ಸಂಪೂರ್ಣ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಪರಿಣಾಮ ಕೆಆರ್‌ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕಾವೇರಿ ನದಿ ನೀರು ವಿವಾದದಿಂದ ತಮಿಳುನಾಡು ಸರ್ಕಾರ ಹಾಗೂ ನಮಗೆ ಭಾರೀ ಸಮಸ್ಯೆ ಉಂಟಾಗಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ 47 ಟಿಎಂಸಿ ನೀರು ಬಿಡಲು ಆದೇಶ ನೀಡಲಾಗಿತ್ತು. ತಮಿಳುನಾಡಿಗೆ ಈಗಾಗಲೇ 80 ಟಿಎಂಸಿಗೂ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾವೇರಿ ವಿವಾದದ ಬಗ್ಗೆ ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ 66 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಆಗಿದೆ. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ. ಈ ಬಾರಿಯಾದರೂ ಅನ್ನದಾತರ ಬದುಕು ಹಸನಾಗಲಿದೆ ಎಂದು ಖುಷಿಪಟ್ಟರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…