ಮೈಸೂರು

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಬಳಕೆಗೆ ನಿರ್ಬಂಧ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆಯನ್ನೂ ಕೂಡ ನಡೆಸಿದ್ದಾರೆ. ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ಹಳದಿ ವಲಯ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

ಅಕ್ಟೋಬರ್ 15 ರಂದು ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ದಸರಾ ಉದ್ಘಾಟನೆ ನೆರವೇರಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

lokesh

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

40 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

49 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago