Barn destroyed in accidental fire.
ಸಾಲಿಗ್ರಾಮ : ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ತಂಬಾಕು ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾಗಿದೆ.
ಗ್ರಾಮದ ರೈತ ರವಿ ಎಂಬವರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿದ್ದ ತಂಬಾಕು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ. ಈ ಸಂದರ್ಭದಲ್ಲಿ ಮನೆಯ ಚಾವಣಿ ಸೇರಿದಂತೆ ತಂಬಾಕು ಹದ ಮಾಡುವ ಮನೆಯ ಎಲ್ಲಾ ಪರಿಕರಗಳು ಕೂಡ ಸುಟ್ಟು ಹೋಗಿವೆ.
ತಕ್ಷಣ ಗ್ರಾಮಸ್ಥರೆಲ್ಲರೂ ಒಟ್ಟುಗೂಡಿ ಬೆಂಕಿ ನಂದಿಸಿದ್ದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ತಗುಲುವುದು ತಪ್ಪಿದೆ. ಬೆಂಕಿ ಅವಘಡದಿಂದ ೫-೬ ಲಕ್ಷ ರೂ. ನಷ್ಟವಾಗಿದೆ. ಆದ್ದರಿಂದ ನಮಗೆ ಪರಿಹಾರವನ್ನು ಕೊಡಬೇಕೆಂದು ನಷ್ಟಕ್ಕೆ ಒಳಗಾಗಿರುವ ರೈತ ರವಿ ಮನವಿ ಮಾಡಿದರು. ರೈತ ರವಿ ಅವರ ನೆರವಿಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಬರಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್ ಒತ್ತಾಯಿಸಿದ್ದಾರೆ.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…