ಮೈಸೂರು: ಇಂದು ಎರಡನೇ ಹಂತದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ಮತದಾನ ಪ್ರಕ್ರಿಯೆ ನಡಯುತ್ತಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜವಂಶಸ್ಥ ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬ ಸಮೇತರಾಗಿ ನಾಡ ದೇವತೆಯ ದರ್ಶನ ಪಡೆದಿದ್ದಾರೆ.
ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಜ ಒಡೆಯರ್ ಮತ್ತು ಅವರ ಪತ್ನಿ ತಿಷಿಕಾ ಕುಮಾರಿ ಒಡೆಯರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ದೇವಿಯ ದರ್ಶನ ಪಡೆದರು.
ಬಳಿಕ ನಗರದ ಶಂಕರಮಠ ರಸ್ತೆಯಲ್ಲಿರುವ ಶ್ರೀಕಾಂತ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.





