mla harish gowda
ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಯಾರದ್ದು ತಪ್ಪು ಯಾರದ್ದು ಸರಿ ಎನ್ನುವುದನ್ನ ಈಗ ಹೇಳಲಿಕ್ಕೆ ಆಗಲ್ಲ. ಏಕಕಾಲದಲ್ಲಿ ಅಷ್ಟೊಂದು ಜನ ಸೇರುತ್ತಾರೆ ಎನ್ನುವ ನಿರೀಕ್ಷೆ ಕೂಡ ಇರಲಿಲ್ಲ ಎಂದಿದ್ದಾರೆ.
ಗುಪ್ತಚರ ಇಲಾಖೆ ಈ ಬಗ್ಗೆ ಮಾಹಿತಿ ನೀಡಿ ಸೂಕ್ತ ಕಾನೂನು ಸುವ್ಯವಸ್ಥೆ ಕೊಡಬೇಕಿತ್ತು. ಆದರೆ ಮಾಹಿತಿ ನೀಡಿಲ್ಲ. ನಮ್ಮ ಸರ್ಕಾರದ ತಪ್ಪೂ ಕೂಡ ಇದೆ. ಹೋದ ಪ್ರಾಣ ಮತ್ತೆ ಬರಲ್ಲ ಘಟನೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.
ಬಿಜೆಪಿಗೆ ಕಿಂಚಿತ್ತು ಮರುಕವಿಲ್ಲ
ಬಿಜೆಪಿ,ಜೆಡಿಎಸ್ ಸಾವಿನ ಮನೆಯಲ್ಲಿ ಗಳ ಎಳೆಯುವ ಕೆಲಸ ಮಾಡುತ್ತಿದೆ. ಅವರಿಗೆ ಘಟನೆ ಬಗ್ಗೆ ಕಿಂಚಿತ್ತು ಮರುಕವಿಲ್ಲ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಬೆಂಗಳೂರು ಕಾಲ್ತುಳಿತ ಪ್ರಕರಣ : ಎನ್‌ಐಎ ತನಿಖೆ ಸಾಧ್ಯತೆ
ಸಾವಿನ ಮೇಲೆ ರಾಜಕೀಯ ಮಾಡುವುದು ಅವರಿಗೆ ಅಭ್ಯಾಸವಾಗಿದೆ. ಅವರು ಹಿಂದಿನಿಂದಲೂ ಜನರ ಭಾವನೆಗಳ ನಡುವೆ ಆಟ ಆಡಿ ಅಭ್ಯಾಸ. ಹಿಂದು ಮುಸ್ಲಿಂ ನಡುವೆ ಕೋಮು ದ್ವೇಷ ಸೃಷ್ಟಿಸಿ ಇದು ವರೆಗೆ ಲಕ್ಷಾಂತರ ಜನ ಸಾಯಿಸಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ ಎಂದು ಆರೋಪಿಸಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…