Mysore
19
mist

Social Media

ಬುಧವಾರ, 18 ಡಿಸೆಂಬರ್ 2024
Light
Dark

ಮುಡಾದಲ್ಲಿ ರಾಜಕಾರಣಿಗಳ ಬೇನಾಮಿ ಆಸ್ತಿ: ಕಾಂಗ್ರೆಸ್‌ ಶಾಸಕರ ಸ್ಪೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ದಿನೇ ದಿನೇ ಹೊಸ ವಿಷಯಗಳು ಹೊರಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಹ ಗುರುವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ರಾಜಕಾರಣಿಗಳು ಬೇನಾಮಿ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದಾರೆ. ಸರಿಯಾಗಿ ತನಿಖೆ ಮಾಡಿದರೆ ಎಲ್ಲರ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.

ಚಾಮುಂಡೇಶ್ವರಿ ನಗರದ ಸರ್ವೋದಯ ಸಂಘದಿಂದ ಸುಮಾರು 48 ಜನರಿಗೆ ಅಕ್ರಮವಾಗಿ ಮುಡಾದಿಂದ ನಿವೇಶನ ನೀಡಲಾಗಿದೆ. ಇದರಲ್ಲಿ ರಾಜಕಾರಣಿಗಳು, ರಿಯಲ್ ಎಸ್ಟೇಟ್‌ ಏಜೆಂಟ್‌ಗಳು‌, ಬಿಲ್ಡರ್‌ಗಳಿಗೆ ನಿವೇಶನ ಕೊಟ್ಟದ್ದಾರೆ. ಬೇನಾಮಿ ಆಸ್ತಿ ಮಾಡಿರುವ ರಾಜಕಾರಣಿಗಳ ಹೆಸರನ್ನು ನಾನು ಹೇಳುವುದಿಲ್ಲ. ಸರಿಯಾಗಿ ತನಿಖೆ ಮಾಡಿದರೆ ರಾಜಕಾರಣಿಗಳ ಹೆಸರು ಹೊರಬರುತ್ತದೆ ಎಂದು ಹೇಳಿದ್ದಾರೆ.

ಮುಡಾದಲ್ಲಿ ಏನೇನೂ ಹಗರಣ ಆಗಿದೇಯೋ ಅದೆಲ್ಲವನ್ನು ಶುದ್ಧಿಕರಣ ಮಾಡುವ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ನಡೆಯುತ್ತಿದೆ. ಮುಡಾ ಬೋರ್ಡ್‌ ಹಾಕಿಸಿ ಆಸ್ತಿಯನ್ನು ರಕ್ಷಣೆ ಮಾಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

14 ನಿವೇಶನಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ ಪಾತ್ರವೇನಿಲ್ಲ. ಸಹೋದರ ನೀಡಿದ್ದ ಜಮೀನಿಗೆ ಪರಿಹಾರವಾಗಿ 50:50 ಅನುಪಾತದಲ್ಲಿ ಜಾಗವನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಅವರು ಯಾವುದೇ ರೀತಿ ರಾಜಕೀಯ ಪ್ರಭಾವ ಬೀರಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

Tags: