ಮೈಸೂರು

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ

ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಅವರುಗಳನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಂತರ ಅವರುಗಳು ಬಾಂಗ್ಲಾ ವಲಸಿಗರಲ್ಲ ಎಂಬುದು ದೃಡಪಟ್ಟಿದೆ.

ಭಾನುವಾರ ಬೆಳಿಗ್ಗೆ ಔರಾ ಎಕ್ಸಪ್ರೆಸ್ ರೈಲಿನ ಮೂಲಕ ಸುಮಾರು 34 ಮಂದಿ ಪ್ರಯಾಣಿಕರು ಬಂದಿದ್ದಾರೆ. ಮೈಸೂರು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವರನ್ನು ಸುತ್ತುವರೆದ ಹಿಂದೂ ಜಾಗರಣ ವೇದಿಕೆ ಸದಸ್ಯರು ಅವರುಗಳನ್ನು ಪ್ರಶ್ನಿಸಿದ್ದಾರೆ. ನಂತರ ಅವರುಗಳು ಬಾಂಗ್ಲಾ ದೇಶದ ಪ್ರಜೆಗಳು ಎಂಬ ಅನುಮಾನ ಮೂಡಿದೆ. ತಕ್ಷಣವೇ ಎಲ್ಲ 34 ಮಂದಿಯನ್ನು ರೈಲ್ವೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂದ ರೈಲ್ವೇ ಪೊಲೀಸರು ಅವರುಗಳ ಆಧಾರ್ ಕಾರ್ಡ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅದರಲ್ಲಿ ಅವರುಗಳು ಪಶ್ಚಿಮ ಬಂಗಾಳ ಮೂಲದವರು ಎಂಬುದು ಗೊತ್ತಾಗಿದೆ. ಆದರೂ, ಆಧಾರ್ ಕಾರ್ಡ್‌ನ ಪರಿಶೀಲನೆಗಾಗಿ ಗ್ರೇಡ್ 2 ತಹಸೀಲ್ದಾರ ಅವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಸ್ಥಳಕ್ಕೆ ಬಂದ ಅವರು ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದ್ದಾರೆ.

ನಂತರ ಅವರುಗಳು ಪಶ್ಚಿಮ ಬಂಗಾಳದ ನಿವಾಸಿಗಳು ಎಂಬದು ಸಾಬೀತಾಗಿದೆ. ಈ ಸಂಬಂದ ಅವರುಗಳ ಆಧಾರ್ ಕಾರ್ಡ್ ನಕಲನ್ನು ಪಡೆದು, ಅವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡ ಪೊಲೀಸರು ಅವರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

ಕೆಲಸಕ್ಕಾಗಿ ಬಂದವರು
ಇಂದು ಮೈಸೂರು, ಮಂಡ್ಯ, ಕೊಡಗು ಸೇರಿದಂತೆ ಅನೇಕ ಸ್ಥಳಗಳಲ್ಲಿ ಪಶ್ಚಿಮ ಬಂಗಾಳದ ವಲಸಿಗರು ಕಟ್ಟಡ, ವಿದ್ಯುತ್, ಪೇಯಿಂಟಿಂಗ್ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರುಗಳು ವಾರಕ್ಕೆ ಒಮ್ಮೆ ಕೋಲ್ಕತ್ತಾದಿಂದ ಬರುವ ಔರಾ ರೈಲಿನಲ್ಲಿ ಮೈಸೂರಿಗೆ ಬರುತ್ತಾರೆ. ನಂತರ ಮೈಸೂರು ಮೂಲಕ ಮಂಡ್ಯ, ಕೇರಳ, ಮಡಿಕೇರಿ ಭಾಗಗಳಿಗೆ ತೆರಳುವುದು ಮಾಮೂಲು. ನೋಡಲು ಬಾಂಗ್ಲಾ ದೇಶದವರಂತೆ ಕಾಣುವುದರಿಂದ ಅವರುಗಳ ಮೇಲೆ ಅನುಮಾನ ಮೂಡಿರುವುದು ಘಟನೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

4 hours ago