Mysore
22
haze

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ.

ತಾಲ್ಲೂಕಿನ ಗಡಿಭಾಗದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು, ರಾತ್ರಿ ವೇಳೆ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಇದನ್ನು ಓದಿ: ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ಮಲಗಿರುವ ಮಕ್ಕಳ ಮನೆಗೆ ತೆರಳಿ ವಿದ್ಯಾರ್ಥಿಗಳನ್ನು ಎಬ್ಬಿಸಿ ಓದಲು ಹುರಿದುಂಬಿಸುತ್ತಿದ್ದಾರೆ. ರಾತ್ರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿರುವ ರಾಜು ಅವರು, ಬೆಳಿಗ್ಗೆ ಎದ್ದು ವಿದ್ಯಾರ್ಥಿಗಳ ಮನೆಗೆ ತೆರಳಿ ಯಾವ ಸಮಯದಲ್ಲಿ ಓದಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಪ್ರತಿ ವಾರ ತಾಲ್ಲೂಕಿನ ಒಂದೊಂದು ಶಾಲೆಗೆ ಭೇಟಿ ನೀಡಿ ಅಲ್ಲೇ ವಾಸ್ತವ್ಯ ಹೂಡಲಿರುವ ರಾಜು ಅವರು, ಗ್ರಾಮದ SSLC ವಿದ್ಯಾರ್ಥಿಗಳಿಗೆ ಪಾಠದ ಜೊತೆ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ.

ಬಿಇಓ ರಾಜು ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದ್ದು, ಈ ಬಾರಿ ಎಚ್.ಡಿ.ಕೋಟೆ ತಾಲ್ಲೂಕು ಫಲಿತಾಂಶ ಯಾವ ರೀತಿಯಲ್ಲಿ ಯಶಸ್ವಿಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags:
error: Content is protected !!