ಮೈಸೂರು

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.

ಗ್ರಾಮದ ಪ್ರಸನ್ನ ಮತ್ತು ವಿಶಾಲಮ್ಮ ದಂಪತಿಯ ಪುತ್ರ, ಬೆಟ್ಟದಪುರ ಪಬ್ಲಿಕ್ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಧನಂಜಯ (13) ಮೃತಪಟ್ಟ ಬಾಲಕ.
ಶನಿವಾರ ಮಧ್ಯಾಹ್ನ 3.30ರ ವೇಳೆಗೆ ಮನೆಯ ಹಿಂದೆ ಸ್ನೇಹಿತರ ಜೊತೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡನ್ನು ತರುವ ಸಲುವಾಗಿ ಬೇಲಿಯ ಹತ್ತಿರ ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾನೆ. ತಕ್ಷಣ ಅಲ್ಲಿದ್ದ ಕೆಲಸಗಾರರು ಬಾಲಕನನ್ನು ವಿದ್ಯುತ್ ಸಂಪರ್ಕದಿಂದ ಬಿಡಿಸಿ, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಆತ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ಈ ಸಂಬಂಧ ಮೃತ ಬಾಲಕನ ಚಿಕ್ಕಪ್ಪ ನಟರಾಜ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

11 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

13 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

14 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

17 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

23 mins ago