ಮೈಸೂರು: ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಬಿನಿ ಜಲಾಶಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ನಾಳೆ ಬೆಳಿಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಸಲ್ಲಿಸಲಿದ್ದಾರೆ.
ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಒಂದೇ ದಿನ ಬಾಗಿನ ಅರ್ಪಿಸುತ್ತಿದ್ದ ವಾಡಿಕೆ ಇತ್ತು. ಆದರೆ ರೈತರು ಹಾಗೂ ಹೋರಾಟಗಾರರ ಪ್ರತಿಭಟನೆಗೆ ಹೆದರಿ ಸರ್ಕಾರ ಬಾಗಿನ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿತ್ತು.
ಇದೀಗ ನಾಳೆ ಸಿಎಂ ಸಿದ್ದರಾಮಯ್ಯ ಅವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದು, ತಾಲ್ಲೂಕು ಆಡಳಿತ ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.



