ಮೈಸೂರು

ಐವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ

ಮೈಸೂರು : ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನೋತ್ಸವದ ಅಂಗವಾಗಿ ಉಡುಪಿ ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ನಾಲ್ವರು ವಿದ್ವಾಂಸರು ಮತ್ತು ಗೌರವ ಪ್ರಶಸ್ತಿಗೆ ಒಬ್ಬ ಗಣ್ಯರು ಆಯ್ಕೆಯಾಗಿದ್ದಾರೆ.

ಶ್ರೀ ರಾಜವಿದ್ಯಾವಂದ್ಯ ಪ್ರಶಸ್ತಿಗೆ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಚಾರ್ಯ, ಪಂಡಿತ ಕೇಶವ ಬಾಯರಿ, ವೇದಪೀಠ ಪ್ರಶಸ್ತಿಗೆ ಉಡುಪಿಯ ಹಿರಿಯ ಪಂಡಿತ ಮತ್ತು ಪರವಿದ್ಯಾ ಪ್ರತಿಷ್ಠಾನದ ಮುಖ್ಯಸ್ಥ ಸಗ್ರಿ ರಾಘವೇಂದ್ರ ಉಪಾಧ್ಯಾಯ ಆಯ್ಕೆಯಾಗಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 1 ಲಕ್ಷ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಯುವ ವಿದ್ವಾಂಸರಿಗೆ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ವಿದ್ಯಾಮಾನ್ಯನಗರದ ವಿದ್ವಾನ್ ಎನ್. ಗಣಪತಿ ಭಟ್ ಮತ್ತು ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿಯ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಪ್ರಮೋದ ಕಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಗೌರವ ಪ್ರಶಸ್ತಿ : ಹಿರಿಯ ಉದ್ಯಮಿ ಮತ್ತು ತಿರುಮಲ- ತಿರುಪತಿ ಬೋರ್ಡ್‌ಗೆ 2 ಬಾರಿ ಸದಸ್ಯರಾಗಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರಿಗೆ ಆಪ್ತ ಕಾರ್ಯದರ್ಶಿಯಾಗಿ ಅನನ್ಯ ಸೇವೆ ಸಲ್ಲಿಸಿದ ಡಿ.ಪಿ. ಅನಂತ ಅವರಿಗೆ ಶ್ರೀಶ ರಾಜದರ್ಶನ- ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮೇ. 2ರಂದು ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಮಠ ಆಯೋಜಿಸಿರುವ ಶ್ರೀ ವೇದವ್ಯಾಸ ಮಹರ್ಷಿಗಳ ರಾಷ್ಟ್ರೀಯ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ. ಇದೇ ಸಂದರ್ಭ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ರಚಿಸಿರುವ 300 ಪದ್ಯಗಳ ಸಂಕಲನ ‘ವಿದ್ಯೇಶ ವಿಠಲಾಂಕಿತ ಕೃತಿ ಮಂಜರೀ’ ಲೋಕಾರ್ಪಣೆಗೊಳ್ಳಲಿದೆ. ಸೋಸಲೆ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

53 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago