Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಭೂಮಿ ಪೂಜೆ

ಮೈಸೂರು : ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಟ್ರಸ್ಟ್ ವತಿಯಿಂದ ನಗರದ ನ್ಯೂ ಕಾಂತರಾಜ ಅರಸ್ ರಸ್ತೆಗೆ ಹೊಂದಿಕೊಂಡಂತೆ ಕನ್ನೇಗೌಡನಕೊಪ್ಪಲಿನಲ್ಲಿ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿರುವ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಗೆ ಹರಿಹರಪುರದ ಶ್ರೀಜ್ಞಾನಪ್ರಕಾಶ ಸಚ್ಚಿದಾನಂದ ಸ್ವಾಮೀಜಿ ಭೂಮಿಪೂಜೆ ನೆರವರಿಸಿದರು.

ಸೋಮವಾರ ಬೆಳಿಗ್ಗೆ ದೇವಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿದರು. ಅವರೊಂದಿಗೆ ಟ್ರಸ್ಟ್ ಅಧ್ಯಕ್ಷರಾದ ಶಾಸಕ ಕೆ.ಹರೀಶ್‌ಗೌಡ ಹಾಗೂ ಇನ್ನಿತರರು ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸ್ವಾಮೀಜಿ, ಶತಮಾನದ ಇತಿಹಾಸವಿರುವ ಈ ದೇವಾಲಯದ ಜೀರ್ಣೋದ್ಧಾರ ಹಾಗೂ ಇನ್ನಿತರ ದೇವಾಲಯಗಳನ್ನು ನಿರ್ಮಾಣ ಮಾಡುತ್ತಿರುವುದು ಸಂತಸದ ಸಂಗತಿ. ಕಾಮಗಾರಿ ಆದಷ್ಟು ಶೀಘ್ರವಾಗಿ ಪೂರ್ಣಗೊಂಡು ದೇವಾಲಯ ಲೋಕಾರ್ಪಣೆಗೊಳ್ಳಲಿ ಎಂದು ಹೇಳಿದರು.

ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಆರೋಪಿ ಮಹದೇವಸ್ವಾಮಿ ಜಾಮೀನು ರದ್ದು ಆಗ್ರಹಿಸಿ ಪ್ರತಿಭಟನೆ

ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ಕನ್ನೇಗೌಡ ಕೊಪ್ಪಲಿನಲ್ಲಿ ನಮ್ಮ ಪೂರ್ವಿಕರು ಶತಮಾನಗಳ ಹಿಂದೆ ಶ್ರೀ ಚಂದ್ರಮೌಳೇಶ್ವರ ಹಾಗೂ ಪಾರ್ವತಿ ದೇವಿಯ ದೇವಾಲಯವನ್ನು ನಿರ್ಮಿಸಿ ಧಾರ್ಮಿಕ ಕಾರ್ಯಗಳನ್ನು ನಡೆಸಿಕೊಂಡು ಬಂದಿದ್ದಾರೆ. ದೇವಾಲಯಕ್ಕೆ ನಮ್ಮ ಪೂರ್ವಜರು ನಾಲ್ಕು ಎಕರೆ ಜಮೀನು ನೀಡಿದ್ದಾರೆ ಎಂದು ಹೇಳಿದರು.

ಇದೀಗ ಮೈಸೂರು ಹಾಗೂ ಕನ್ನೇಗೌಡನ ಕೊಪ್ಪಲು ಜನರ ಸಹಕಾರದೊಂದಿಗೆ ಸುಮಾರು ೪೦ ಕೋಟಿ ರೂ. ವೆಚ್ಚದಲ್ಲಿ ದೇವಾಲಯ ಜೀರ್ಣೋದ್ಧಾರ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಂಡು ದೇವಾಲಯ ಲೋಕಾರ್ಪಣೆಗೊಳ್ಳಲಿದೆ ಎಂದರು.

ಇಲ್ಲಿ ಶ್ರೀ ಚಂದ್ರಮೌಳೇಶ್ವರ ಸ್ವಾಮಿ, ಪಾರ್ವತಿದೇವಿ, ಲಕ್ಷ್ಮೀನರಸಿಂಹ, ಕಾಲಭೈರವೇಶ್ವರ, ಗಣೇಶ, ಸುಬ್ರಹಣ್ಯ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳನ್ನು ನಿರ್ಮಿಸಲಾಗುತ್ತಿದೆ. ನಗರದ ಜನತೆ ತಮ್ಮ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು.

ಭೂಮಿ ಪೂಜೆ ಅಂಗವಾಗಿ ಸೋಮವಾರ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗಿತ್ತು. ಬೆಳಿಗ್ಗೆ ಹಾಗೂ ಮಧ್ಯಾಹ್ನ ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಮಂದಿ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಟ್ರಸ್ಟ್‌ನ ಗೌರವಾಧ್ಯಕ್ಷ ಎಂ.ರಾಮೇಗೌಡ, ಉಪಾಧ್ಯಕ್ಷ ಎಂ.ಮಹೇಶ್, ಕಾರ್ಯದರ್ಶಿ ಎಂ.ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!