Mysore
17
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

bhirappa

ಮೈಸೂರು : ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್ 24) ಮಧ್ಯಾಹ್ನ 2.38ಕ್ಕೆ ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ.

ಇನ್ನು ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಅಂದರೆ ಸೆಪ್ಟೆ.ಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನು ಓದಿ : ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರ ಸಂತಾಪ

ಶುಕ್ರವಾರ (ಸೆಪ್ಟೆಂಬರ್ 24) ಮಧ್ಯಾಹ್ನ ಬ್ರಾಹ್ಮಣ ಸಂಪ್ರದಾಯದಂತೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಭೈರಪ್ಪ ಅವರ ಪಾರ್ತೀವ ಶರೀರವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸಲಾಗಿದ್ದು. ನಾಳೆ (ಸೆಪ್ಟೆಂಬರ್ 25) ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುತ್ತದೆ.

ಇನ್ನು ನಾಳೆ (ಸೆಪ್ಟೆಂಬರ್ 25) ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿದ ಡಾ. ಎಸ್.ಎಲ್. ಭೈರಪ್ಪ ನಿಧನರಾಗಿದ್ದಾರೆ. ಸಾಹಿತ್ಯ ಲೋಕದ ಮಾಣಿಕ್ಯ,ಕನ್ನಡದ ಸರಸ್ವತಿ ಪುತ್ರ ಭೈರಪ್ಪ ಕಣ್ಮರೆಯಾದರೂ ಅವರ ಕಾದಂಬರಿಗಳು ಮಾತ್ರ ಎಂದೆಂದಿಗೂ ಅಜರಾಮರ. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ. ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಹೆಸರು ಮಾಡಿದ್ದಾರೆ.

Tags:
error: Content is protected !!