ಮೈಸೂರು: ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಾ ಅಜಾಗರೂಕತೆಯಿಂದ ರೈಲ್ವೆ ಹಳಿ ದಾಟುತಿದ್ದ ವ್ಯಕ್ತಿಗೆ ರೈಲು ಗುದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ.
ಬೆಳಿಗ್ಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…