ನಂಜನಗೂಡು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ.
ಕುಮಾರ್ ಹಾಗೂ ಮಹೇಶ್ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.