ಮೈಸೂರು: ಜಿಲ್ಲೆಯ ಟಿ.ನರಸೀಪುರದ ಇಂಡವಾಳು ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
21 ವರ್ಷದ ಯುವಕ ಪವನ್ ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಟಿ.ನರಸೀಪುರ ತಾಲ್ಲೂಕಿನ ಕರೋಹಟ್ಟಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಪವನ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಪವನ್ ಹೆಲ್ಮೆಟ್ ಕೂಡ ಪಕ್ಕಕ್ಕೆ ಬಿದ್ದಿದೆ. ಬೈಕ್ ಒಂದು ಕಡೆ ಹಾಗೂ ಯುವಕನ ಮೃತದೇಹ ಒಂದು ಕಡೆ ಬಿದ್ದಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…
ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…