ಮೈಸೂರು

ಬಸ್ ಗೆ ಕಲ್ಲು ತೂರಿದ ಬೈಕ್ ಸವಾರರು : ಪ್ರಕರಣ ದಾಖಲು

ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್‌ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ.

ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್‌ ನ ಕಿಟಕಿ ಗಾಜಿಗೆ ಹಾನಿಯಾಗಿದೆ. ಮೂಡಗೆರೆ, ಹಾಸನ, ಕೆ.ಆರ್.ನಗರ ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರ ಮಲ್ಲಿನಾಥಪುರ ಬಳಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಸವಾರರು ಬಸ್‌ ಗೆ ಕಲ್ಲು ಹೊಡೆದು ಕಿಟಕಿ ಗಾಜಿಗೆ ಹಾನಿ ಮಾಡಿದ್ದಾರೆ ಎಂದು ಚಾಲಕ ಲೋಕೇಶ್ ಬಿಳಿಕೆರೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೈಕ್ ಸವಾರರ ಪತ್ತೆಗೆ ಕ್ರಮ ವಹಿಸಿದ್ದಾರೆ.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

20 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

21 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

21 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

21 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

21 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago