ಮೈಸೂರು

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಸಾಗಾರಕಟ್ಟೆ ಗ್ರಾಮದ ಬಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಂತೋಷ್ ಎಂಬ 17 ವರ್ಷದ ಅಪ್ರಾಪ್ತ ಯುವಕ ಸ್ನೇಹಿತರೊಂದಿಗೆ ಬೈಕ್ ವೀಲಿಂಗ್ ಮಾಡುತ್ತಿದ್ದಾನೆ ಎಂಬ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೀಲಿಂಗ್‌ಗೆ ಬಳಸಲಾಗಿದ್ದ ಡಿಯೋ ಸ್ಕೂಟರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ವಾಹನದ ಮಾಲೀಕನ ಮೇಲೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮದ ‘ಲೈಕ್’ ಮತ್ತು ‘ಫಾಲೋವರ್ಸ್’ ಕ್ರೇಜ್‌ಗೆ ಒಳಗಾಗಿ ರಸ್ತೆಯಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ ಯುವಕರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂತಹ ಕೃತ್ಯಗಳು ಸಾರ್ವಜನಿಕರ ಜೀವಕ್ಕೆ ಅಪಾಯ ತರುವುದರ ಜೊತೆಗೆ ರಸ್ತೆ ಸುರಕ್ಷತೆಗೆ ದೊಡ್ಡ ಧಕ್ಕೆ ತರುತ್ತವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ಮುಂದುವರೆದಿದ್ದು, ಇನ್ನಿತರ ಸಂಬಂಧಿತರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಇಲವಾಲ ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

2 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

2 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

3 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

3 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

3 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

3 hours ago