Biker dies in tractor collision
ತಿ.ನರಸೀಪುರ : ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ನಂಜನಗೂಡು ರಸ್ತೆಯ ಆರ್‌ಎಂಸಿ ಬಳಿ ಶನಿವಾರ ರಾತ್ರಿ ನಡೆದಿದೆ.
ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ವೀರಭದ್ರಪ್ಪ ಎಂಬವರ ಪುತ್ರ ಕುಮಾರ ಅಲಿಯಾಸ್ ಬಸವಣ್ಣ ಮೃತಪಟ್ಟವರು.
ಕುಮಾರ್ ಅವರು ಶನಿವಾರ ರಾತ್ರಿ 10:20 ರ ಸಮಯದಲ್ಲಿ ತಿ.ನರಸೀಪುರ ಪಟ್ಟಣದಿಂದ ಸ್ವಗ್ರಾಮ ಹೆಳವರ ಹುಂಡಿ ಗ್ರಾಮಕ್ಕೆ ಬೈಕ್‌ನಲ್ಲಿ ನಂಜನಗೂಡು ಏಕಮುಖ ರಸ್ತೆಯಲ್ಲಿ ಎಡ ಭಾಗದಲ್ಲಿ ಹೋಗುತ್ತಿದ್ದ ವೇಳೆ ಹೆಳವರಹುಂಡಿ ಗ್ರಾಮದ ಕಡೆಯಿಂದ ಏಕಮುಖ ಸಂಚಾರವಿದ್ದರೂ ಬಲಭಾಗದಲ್ಲಿ ಟ್ರಾಕ್ಟರ್‌ಅನ್ನು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ತೀವ್ರವಾದ ಗಾಯಗಳಾಗಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಸ್ನೇಹಿತರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಅಪಘಾತ ಮಾಡಿದ ಟ್ರಾಕ್ಟರ್ ಚಾಲಕ ರಸ್ತೆಯಲ್ಲಿಯೇ ಟ್ರಾಕ್ಟರ್ ಹಾಗೂ ಟ್ರಾಲಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಮೃತ ಕುಮಾರನ ಸಹೋದರ ಸೋಮಶೇಖರ್ ಪಟ್ಟಣ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ…
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…