ಹುಣಸೂರು: ಜಮೀನಿನಲ್ಲಿ ವ್ಯವಸಾಯ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಕುಪ್ಪೆಕೊಳಘಟ್ಟ ಗ್ರಾಮದ ನಿವಾಸಿ ಮಂಜುನಾಥ್ (೪೮) ಮೃತಪಟ್ಟವರು.
ಇವರು ಮಂಗಳವಾರ ಸಂಜೆ ವ್ಯವಸಾಯ ಮುಗಿಸಿಕೊಂಡು ಮನೆಗೆ ತೆರಳುತ್ತಿರುವ ಸಮಯದಲ್ಲಿ ರಸ್ತೆ ದಾಟುವಾಗ ಹುಣಸೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಈ ಸಂಬಂಧ ಬಿಳಿಕೆರೆ ಗ್ರಾವಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.