ಮೈಸೂರು

ದರ್ಶನ್‌ ಅಭಿಮಾನಿಗಳಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು.

ಡಬ್ಬಿಗಳನ್ನು ಮರಗಳಿಗೆ ಮೊಳೆಯನ್ನು ಹೊಡೆಯದೇ ನೇತುಹಾಕಿದ್ದು ವಿಶೇಷವಾಗಿತ್ತು.ಸುಮಾರು‌ 30 ಮರಗಳಿಗೆ ಡಬ್ಬಿಗಳನ್ನು ಅಳವಡಿಸಲಾಯಿತು.

ಈ ಅನಬಿಯಾನಕ್ಕೆ ಪರಿಸರ ಪ್ರೇಮಿ ಬನ್ನೂರು ಮಹೇಂದ್ರ ಸಿಂಗ್ ಕಾಳಪ್ಪ ಡಬ್ಬಿಗಳಿಗೆ ಆಹಾರ-ಧಾನ್ಯ ಹಾಕುವ ಮೂಲಕ ಛಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನೆಯ ಮೇಲೆ ಅಥವಾ ಮನೆಯ ಮುಂದೆ ಪಕ್ಷಿ ಪ್ರಾಣಿಗಳಿಗೆ ನೀರಿನ ಬಟ್ಟಲು ಇಡಿ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು, ಹಾಗಾಗಿ ಅಭಿಮಾನಿಗಳು ಅವರ ಕರೆಗೆ ಓಗೊಟ್ಟು ಪ್ರಾಣಿ ಪಕ್ಷಿ ಸಂರಕ್ಷಿಸಲು ನೀರಿನ ಬಟ್ಟಲನ್ನು ಮರಗಳಿಗೆ ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ತಿಳಿಸಿದರು.

ಸ್ವತಃ ದರ್ಶನ್ ರವರು ಪ್ರಾಣಿಪ್ರಿಯರು. ಮೃಗಾಲಯದಲ್ಲಿ ಪ್ರಾಣಿ ದತ್ತು ಸ್ವೀಕರಿಸುವುದು, ಪ್ರಾಣಿ-ಪಕ್ಷಿ ಸಾಕುವುದು ಅವರಿಗೆ ಅತೀ ಪ್ರೀತಿ ಎಂದು ಹೇಳಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಕಲ ಜೀವರಾಶಿಗಳಲ್ಲಿ ದೇವರನ್ನು ಕಾಣು ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ, ಪಕ್ಷಿಗಳಿಗೆ ನವಣೆ, ಕಡಲೆ ಹೊಟ್ಟು, ಅಕ್ಕಿ ನುಚ್ಚು ನೀಡುವುದು ಒಳ್ಳೆಯದು ಎಂದು ಹೇಳಿದರು.

ಈ ವೇಳೆ ನೋಡಲು ಅಧಿಕಾರಿ ಎಸ್. ಕೆ ಮಿತಲ್, ಲಾಯರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಉಮೇಶ್, ದರ್ಶನ್ ಅಭಿಮಾನಿ ಬಳಗದ ಸಂಚಾಲಕರಾದ ಬೈರತಿ ಲಿಂಗರಾಜು, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಪ್ರಕಾಶ್ ಪ್ರಿಯದರ್ಶನ್, ಜಿ ರಾಘವೇಂದ್ರ, ಕಡಕೋಳ ಜಗದೀಶ್, ಎಸ್ ಎನ್ ರಾಜೇಶ್, ರಾಕೇಶ್, ಸುಚಿಂದ್ರ, ವಿಜಯ್ ನಾಯಕ್, ಭಾಸ್ಕರ್ , ಸಿದ್ದರಾಜು ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು

andolanait

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

4 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

4 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

5 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

5 hours ago