Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಇಂಧನ ಬೆಲೆ ಏರಿಕೆ; ಮೈಸೂರಿನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿ ಜನತೆಯ ಹೊಟ್ಟೆ ಮೇಲೆ ಬರೆ ಎಳೆದಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಈ ಮಧ್ಯೆ ಇಂಧನ ಬೆಲೆ ಏರಿಕೆ ಮಾಡಿರುವುದು ಎಲ್ಲರಿಗೂ ಬರ ಸಿಡಿಲು ಬಡಿದಂತಾಗಿದೆ. ಆದಷ್ಟು ಬೇಗ ಬೆಲೆಯನ್ನು ಕಡಿಮೆ ಮಾಡಿ, ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸಬೇಕು. ಒಂದು ವೇಳೆ ಬೆಲೆಕಡಿಮೆ ಮಾಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಒಟ್ಟಾರೆಯಾಗಿ ಇಂಧನ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದು, ಸರ್ಕಾರ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಕುಳಿತಿದೆ.

Tags: