ಮೈಸೂರು: ಇಂಧನ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧೀಜಿ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿ ಜನತೆಯ ಹೊಟ್ಟೆ ಮೇಲೆ ಬರೆ ಎಳೆದಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಈ ಮಧ್ಯೆ ಇಂಧನ ಬೆಲೆ ಏರಿಕೆ ಮಾಡಿರುವುದು ಎಲ್ಲರಿಗೂ ಬರ ಸಿಡಿಲು ಬಡಿದಂತಾಗಿದೆ. ಆದಷ್ಟು ಬೇಗ ಬೆಲೆಯನ್ನು ಕಡಿಮೆ ಮಾಡಿ, ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸಬೇಕು. ಒಂದು ವೇಳೆ ಬೆಲೆಕಡಿಮೆ ಮಾಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ಒಟ್ಟಾರೆಯಾಗಿ ಇಂಧನ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದು, ಸರ್ಕಾರ ಮಾತ್ರ ಯಾವುದಕ್ಕೂ ಕ್ಯಾರೇ ಎನ್ನದೇ ಕುಳಿತಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…