Mysore
23
broken clouds

Social Media

ಬುಧವಾರ, 09 ಜುಲೈ 2025
Light
Dark

ರೇಡಿಯೋ ಮಿರ್ಚಿಯಲ್ಲಿ ಯದುವೀರ್ ಕಾರ್ಯಕ್ರಮ: ಚುನಾವಣೆ ಆಯೋಗಕ್ಕೆ ಕಾಂಗ್ರೆಸ್‌ ದೂರು

ಮೈಸೂರು: ಮೈಸೂರಿನ 104.8 ರೇಡಿಯೋ ಮಿರ್ಚಿ ಚಾನೆಲ್‌ನಲ್ಲಿ ಮೈಸೂರು ಸಂಸ್ಥಾನದ ಇತಿಹಾಸದ ಬಗ್ಗೆ ಸಂದರ್ಶನದ ರೂಪದಲ್ಲಿ ರಾಜರಿಂದಲೇ ರಾಜರ ಕಥೆಗಳು ಎಂಬ ಶೀರ್ಷಿಕೆಯಲ್ಲಿ ಮೈಸೂರು ಕೊಡಗು ಕ್ಷೇತ್ರದ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತುಗಳು ಪ್ರಸಾರವಾಗುತ್ತಿದೆ.

ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತನ್ನು ಕೂಡ ಪ್ರಕಟಿಸಲಾಗುತ್ತಿದೆ ಎಂದು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ವಕ್ತಾರ ಹೆಚ್ ಎ ವೆಂಕಟೇಶ್ ದೂರಿದ್ದಾರೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುವುದರಿಂದ ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Tags:
error: Content is protected !!